HomeKarnatakaGruhalakshmi Scheme : ಯಜಮಾನಿಯರೇ ಗಮನಿಸಿ : ಈ `ಮೆಸೇಜ್’ ಬಂದಿದ್ರೆ ಮಾತ್ರ ನಿಮ್ಮ ಖಾತೆಗೆ...

Gruhalakshmi Scheme : ಯಜಮಾನಿಯರೇ ಗಮನಿಸಿ : ಈ `ಮೆಸೇಜ್’ ಬಂದಿದ್ರೆ ಮಾತ್ರ ನಿಮ್ಮ ಖಾತೆಗೆ 2,000 ರೂ.ಜಮಾ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಗಿದ್ದು, ಮಹಿಳೆಯರ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದು, ಯೋಜನೆಗೆ ಆಯ್ಕೆ ಆದವರಿಗೆ ಮೊಬೈಲ್ ಸಂದೇಶ ರವಾನಿಸಲಾಗಿದ್ದು, ಸಂದೇಶ ಬಂದವರ ಮೊಬೈಲ್ ಸಂಖ್ಯೆಗೆ ` ಅಭಿನಂದನೆಗಳು, ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ GL-120……… ಅನ್ನು ಅನುಮೋದಿಸಲಾಗಿದೆ. ಆಗಸ್ಟ್ 2023 ರಿಂದ ರೂ.2000 ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಧನ್ಯವಾದಗಳು – ನಿಮ್ಮ ಕರ್ನಾಟಕ ಸರ್ಕಾರ ಎಂದು ಸಂದೇಶ ರವಾನಿಸಲಾಗಿದೆ. ಮೆಸೇಜ್ ಬಂದ ಖಾತೆಗಳಿಗೆ ಮಾತ್ರ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವು ಹೇಗೆ ?

ಫಲಾನುಭವಿಗಳು ಗ್ರಾಮ ಒನ್, ಆನ್ಲೈನ್ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ನಾಡ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹಾಗೂ ಪ್ರಜಾ ಪ್ರತಿನಿಧಿ ಮೂಲಕ ಸಹ ಪೋರ್ಟಲ್ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

ಅರ್ಜಿದಾರರು ರೇಷನ್ ಕಾರ್ಡ್ ಸಂಖ್ಯೆ, ಮನೆಯ ಯಜಮಾನಿಯ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕು.  ತಾಯಿ ಕುಟುಂಬದ ಮುಖ್ಯಸ್ಥೆಯಾಗಿದ್ದರೆ ಮತ್ತು ಇತ್ತೀಚೆಗೆ ಅವರು ನಿಧನರಾಗಿದ್ದರೆ, ಪಡಿತರ ಚೀಟಿಯಲ್ಲಿ ಯಜಮಾನಿ ಯಾರೆಂಬುದು ಅಗತ್ಯ ತಿದ್ದುಪಡಿಯಾದ ನಂತರ ನೊಂದಾಯಿಸಬಹುದು.

ಇನ್ನು ಫಲಾನುಭವಿಗಳು ಸರ್ಕಾರಿ ವಲಯದಲ್ಲಿ ಕೆಲಸ ಮಾಡಿದ್ದರೆ, ಈಗ ಅವರು ನಿವೃತ್ತರಾಗಿ ಪಿಂಚಣಿ ಪಡೆಯುತ್ತಿದ್ದರೂ ಕೂಡ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಆದರೆ ಅವರು ಆದಾಯ ತೆರಿಗೆಯನ್ನು ಪಾವತಿಸುವವರಾಗಿರಬಾರದು.

ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಘೋಷಿತರಾಗಿರುವ ಮಂಗಳಮುಖಿಯರು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಪಡಿತರ ಚೀಟಿಯಲ್ಲಿ ಪತಿಯು ಕುಟುಂಬದ ಮುಖ್ಯಸ್ಥ ಎಂದಿರುವುದನ್ನು ಕುಟುಂಬದ ಯಜಮಾನಿ ಮಹಿಳೆ ಎಂದು ಬದಲಾಯಿಸಿ ನೊಂದಾಯಿಸಿಕೊಳ್ಳಬಹುದು.  ಈ ಯೋಜನೆಗೆ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವನ್ನು ನಿಗದಿ ಮಾಡಿರುವುದಿಲ್ಲ.

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ ಟಾಲ್ಫ್ರೀ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular