Gruhalakshmi Scheme : ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ : ಮಹಾರಾಜ ಕಾಲೇಜು ಮೈದಾನದಲ್ಲಿ ಜನಸಾಗರ

ಮೈಸೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಇಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದ ಸುತ್ತ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಕೆಲವೇ ಕ್ಷಣಗಳಲ್ಲಿ ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಬಳಿಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read