HomeLatest NewsBIG NEWS: ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ ವಿಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

BIG NEWS: ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ ವಿಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಪರೀಷ್ಕರಣೆ ವಿಚಾರವಾಗಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈ‌ಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು.

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular