ಮೈಸೂರು: ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.
ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.
You Might Also Like
TAGGED:ಗೃಹಲಕ್ಷ್ಮಿ ಯೋಜನೆ