HomeLatest NewsBIG NEWS: ಗೃಹಲಕ್ಷ್ಮಿ ಹಣ ಹಾಕಲು ಯಾವುದೇ ತೊಡಕುಗಳಿಲ್ಲ; ಸಕಾಲದಲ್ಲಿ ಸಂದಾಯವಾಗಿದೆ ಎಂದ ಸಚಿವೆ ಲಕ್ಷ್ಮೀ...

BIG NEWS: ಗೃಹಲಕ್ಷ್ಮಿ ಹಣ ಹಾಕಲು ಯಾವುದೇ ತೊಡಕುಗಳಿಲ್ಲ; ಸಕಾಲದಲ್ಲಿ ಸಂದಾಯವಾಗಿದೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮೈಸೂರು: ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.

ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular