ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.
ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.