HomeLatest NewsBIG NEWS: ಗೃಹಲಕ್ಷ್ಮಿಯರ ಗಮನಕ್ಕೆ: ಮೇ ತಿಂಗಳಲ್ಲಿ ಮೂರು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ: ಸಚಿವೆ...

BIG NEWS: ಗೃಹಲಕ್ಷ್ಮಿಯರ ಗಮನಕ್ಕೆ: ಮೇ ತಿಂಗಳಲ್ಲಿ ಮೂರು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ

ಬೆಳಗಾವಿ: ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ, ಮಾರ್ಚ್ ಈ ಮೂರು ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular