GOOD NEWS: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, ವಸ್ತ್ರ, ಬಟ್ಟೆ ಅಂಗಡಿಗಳನ್ನು ತೆರೆದಿದ್ದಾರೆ. ಇಲ್ಲೋರ್ವ ಮಹಿಳೆ ಗೃಹಲಕ್ಷ್ಮೀ ಯೋಜನೆ ಹಣದಿಂದ ಮಗನಿಗೆ ಬೈಕ್ ಕೊಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿದ ದಸರಾ ಸಂದರ್ಭದಲ್ಲಿ ಮಗನಿಗೆ ಬೈಕ್ ಕೊಡಿಸಿದ್ದಾರೆ.

ಮಹಿಳೆ ಬಾಗವ್ವಾ ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸಿದ್ದಾರೆ. ಶುಕ್ರವಾರ ಆಯುಧ ಪೂಜೆ ದಿನದಂದು ಶೋ ರೂಮಿನಿಂದ ಬೈಕ್ ಖರೀದಿಸಿ, ಪೂಜೆ ಮಾಡಿ ಸಂಭ್ರಮಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಹಣ ಇಂದು ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಾನಾ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಅದರಂತೆ ಕೌಜಲಗಿಯ ಬಾಗವ್ವಾ ನೀಲಪ್ಪ ಸಣ್ಣಕ್ಕಿಅವರು ತನ್ನ ಮಗನಿಗೆ ಬೈಕ್ ಕೊಡಿಸಿ ಆತನಿಗೆ ದುಡಿಮೆಗೆ ಹೋಗಲು ನೆರವಾಗಿದ್ದಾರೆ.

ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತವರು ಜಿಲ್ಲೆ ಕೌಜಲಗಿಯ ತಾಯಿ -ಮಗನಿಗೆ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read