HomeLive NewsBREAKING: ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸ: ಸದನಕ್ಕೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ...

BREAKING: ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸ: ಸದನಕ್ಕೆ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆರ್.ಅಶೋಕ್ ಆಗ್ರಹ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ಕೊಡಬೇಕಿತ್ತು. ಅಂದರೆ ರಾಜ್ಯದ ಲೆಕ್ಕಾಚಾರದಲ್ಲಿ ತಿಂಗಳಿಗೆ 2500 ಕೋಟಿ ಲೆಕ್ಕ ಕೊಡಬೇಕಾಗಿತ್ತು. ಪ್ರೆಬ್ರವರಿ, ಮಾರ್ಚ್ ತಿಂಗಳಲ್ಲಿ ಕೊಡಬೇಕಿದ್ದ 5000 ಕೋಟಿ ಮುಚ್ಚಿಟ್ಟಿದ್ದಾರೆ. ರಾಜ್ಯ ಸರ್ಕಾರ 1.24 ಕೋಟಿ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು.

ಸ್ವತಃ ಮುಖ್ಯಮಂತ್ರಿಗಳೇ ಗೊಂದಲಕ್ಕೆ ಸಿಲುಕಿದ್ದಾರೆ. ಸದನಕ್ಕೆ ತಪ್ಪು ಮಾಹಿತಿ ನೀಡುವಂತೆ ಅಧಿಕಾರಿಗಳು ಮಾಡಿದ್ದಾರೆ. ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5000 ಕೋಟಿ ರೂಪಾಯಿ ಎಲ್ಲಿ ಹೋಗಿದೆ? ಎಂದು ಲೆಕ್ಕ ಕೊಡಿ ಜಿಲ್ಲಾಧಿಕಾರಿಗಳನ್ನು ಕೇಳಿದರೆ ಹಣ ಬಂದಿಲ್ಲ ಅಂತಾರೆ. ಹಾಗಾದರೆ 5000 ಕೋಟಿ ರೂ ಯಾರ ಜೇಬಿಗೆ ಹೋಯಿತು? ನಾಳೆ ವಿಧಾನಸಭೆಯಲ್ಲಿ ಮತ್ತೆ ಈ ಚಾರ ಪ್ರಸ್ತಾಪಿಸಲಾಗುತ್ತದೆ. ಮಂತ್ರಿ ರಾಜೀನಾಮೆ ಕೊಡಬೇಕು ಇಲ್ಲವೇ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular