Gruhalakshmi Scheme : ಮಹಿಳೆಯರೇ `ಗೃಹಲಕ್ಷ್ಮೀ ಯೋಜನೆ’ ಲಾಭ ಪಡೆಯಲು ನಿಮಗಿದು ಅಪೂರ್ವ ಅವಕಾಶ!

ಬೆಂಗಳೂರು :  ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನಿಮಗಿದೋ ಅಪೂರ್ವ ಅವಕಾಶ,ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯ ಸ್ಥಾನದ ತಿದ್ದುಪಡಿಗಳಿದ್ದಲ್ಲಿ, ಕೂಡಲೇ ಅರ್ಜಿ ಸಲ್ಲಿಸಿ ಹಾಗೂ ಯೋಜನೆಯ ಪ್ರಯೋಜನ ಪಡೆಯಬಹುದು.

ಹೌದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಸೆಪ್ಟೆಂಬರ್ 10 ರವರಗೆ ಅವಕಾಶ ನೀಡಲಾಗಿದ್ದು, ಅರ್ಹ ಮಹಿಳೆಯರು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯಲ್ಲಿ ತಿದ್ದುಪಡಿ ಅಥವಾ ಸೇರ್ಪಡೆಗೆ ಅವಕಾಶ ನೀಡಿದೆ. ಗೃಹಲಕ್ಷ್ಮಿಯೋಜನೆಯ ಲಾಭ ಪಡೆಯಲು ಕುಟುಂಬದ ಯಜಮಾನಿಯ ಸ್ಥಾನ ಬದಲಾಯಿಸುವ ಅವಶ್ಯಕತೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದು.

ಯಾವೆಲ್ಲ ಸಂದರ್ಭಗಳಲ್ಲಿ ಬದಲಾಯಿಸಬಹುದು?

ಯಜಮಾನಿಯ ಸ್ಥಾನದಲ್ಲಿರುವ ಮಹಿಳೆ ನಿಧನರಾಗಿದ್ದರೆ

ಪಡಿತರ ಚೀಟಿಯಲ್ಲಿ ಪುರುಷ ಕುಟುಂಬದ ಮುಖ್ಯಸ್ಥನಾಗಿದ್ದರೆ

ಯಜಮಾನಿಯ ಸ್ಥಾನವನ್ನು ಅತ್ತೆಯಿಂದ ಸೊಸೆಗೆ ಅಥವಾ ಸೊಸೆಯಿಂದ ಅತ್ತೆಗೆ ವರ್ಗಾಯಿಸಬೇಕಾಗಿದ್ದರೆ

ಯೋಜನೆಗೆ ಇದುವರೆಗೂ ನೋಂದಾಯಿಸದೇ ಇರುವವರು ಯಜಮಾನಿಯ ಬದಲಾವಣೆ ಮಾಡಿಕೊಳ್ಳಬಹುದು.

ಸೂಚನೆ : ಯೋಜನೆಯಡಿ ಈಗಾಗಲೇ ನೋಂದಾಯಿಸಿ ಯಜಮಾನಿಯ ಬದಲಾವಣೆಗೆ ಅರ್ಜಿ ಸಲ್ಲಿಸಿದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಅರ್ಜಿ ಇತ್ಯರ್ಥಗೊಳ್ಳುವವರೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ತಡೆಹಿಡಿಯಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read