HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಡೇಟ್ ಫಿಕ್ಸ್

BIG NEWS: ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಡೇಟ್ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಚಾಲನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ವರಿಷ್ಠರಾದ‌ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುತ್ತಿದೆ. ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಯೋಜನೆಗೆ ಚಾಲನೆ ಸಿಗಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular