HomeKarnatakaBIG NEWS: 15 ದಿನದೊಳಗೆ ಎಲ್ಲರ ಖಾತೆಗೂ ಗೃಹಲಕ್ಷ್ಮೀ ಹಣ ಬರಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

BIG NEWS: 15 ದಿನದೊಳಗೆ ಎಲ್ಲರ ಖಾತೆಗೂ ಗೃಹಲಕ್ಷ್ಮೀ ಹಣ ಬರಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಹಲವು ಮಹಿಳೆಯರ ಖಾತೆಗೆ ಹಣ ಬಾರದಿರುವುದಕ್ಕೆ ದೂರುಗಳು ಬರುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು ಒನ್ ಸೆಂಟರ್ ಗೆ ಭೇಟಿ ನೀಡಿ ಪ್ರತಿ ಜಿಲ್ಲೆಯ ಮಾಹಿತಿಗಳನ್ನು ಪಡೆದರು.

ಗೃಹಲಕ್ಷ್ಮೀ ಅರ್ಜಿ ಬಾಕಿ ಇರುವ ಬಗ್ಗೆ ಹಾಗೂ ಶೀಘ್ರವಾಗಿ ವಿಲೇವಾರಿ ಮಾಡುವಂತೆ ಆಯಾ ಜಿಲ್ಲಾ ಸಿಡಿಪಿಒಗಳಿಗೆ ಸೂಚನೆ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಂತ್ರಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. 15 ದಿನಗಳಲ್ಲಿ ಮಹಿಳೆಯರ ಖಾತೆಗೆ ಹಣ ಬರಲಿದೆ. ಮೂರು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಒಟ್ಟಿಗೆ ವರ್ಗಾವಣೆಯಾಗಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular