ಬೆಳಗಾವಿ: ಹೊಸ ವರ್ಷದ ಹೊಸ್ತಿಲಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕೆಲ ತಿಂಗಳಿಂದ ಜಮೆಯಾಗದ ಗೃಹಲಕ್ಷ್ಮಿ ಹಣ ಇಂದು ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.
ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ 2,000 ರೂ. ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಹೊಸ ವರ್ಷದ ವೇಳೆ ಫಲಾನುಭವಿಗಳ ಖಾತೆಗೆ ಒಂದು ಕಂತಿನ ಹಣ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

