HomeKarnatakaBIG NEWS: ಗೃಹಲಕ್ಷ್ಮಿ ಹಣ ಲಪಟಾಯಿಸಿದ ಸರ್ಕಾರ ಎಂದ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು

BIG NEWS: ಗೃಹಲಕ್ಷ್ಮಿ ಹಣ ಲಪಟಾಯಿಸಿದ ಸರ್ಕಾರ ಎಂದ ಬಿಜೆಪಿ ನಾಯಕರಿಗೆ ಸಿಎಂ ತಿರುಗೇಟು

ಮೈಸೂರು: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗದ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸರ್ಕಾರ ಹಣ ಲಪಟಾಯಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದಾರೆ.

ಬಿಜೆಪಿ ನಾಯಕರ ಆರೋಪಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.

ಫೆಬ್ರವರಿ, ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದರು. 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ ?ಎಂದರು. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ? ಎಂದರು. ಹಣವನ್ನು ಯಾರು ತೆಗೆದುಕೊಳ್ಳಲಾಗುವುದಿಲ್ಲ ಹಣ ಇನ್ನು ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular