HomeKarnataka‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಸುಳ್ಳು ಆಶ್ವಾಸನೆ ನಂಬಿ ಹಣ ನೀಡದಂತೆ ಮನವಿ

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಸುಳ್ಳು ಆಶ್ವಾಸನೆ ನಂಬಿ ಹಣ ನೀಡದಂತೆ ಮನವಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ಕುಟುಂಬದ ಯಜಮಾನಿಯರು ನೋಂದಣಿ ಸೌಲಭ್ಯ ಪಡೆಯಲು ‘ಸೇವಾ ಸಿಂಧು’ ಹಾಗೂ ‘ಗ್ರಾಮ ಒನ್’ ಕೇಂದ್ರಗಳಲ್ಲಿ ನೋಂದಣಿ ಮಾಡುವ ಸಂದರ್ಭದಲ್ಲಿ ಕೆಲವರು ಸೌಲಭ್ಯ ಕೊಡಿಸುವುದಾಗಿ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಪಡೆಯುತ್ತಿರುವುದು ದೂರುಗಳಿಂದ ತಿಳಿದುಬಂದಿದೆ.

ಆದ್ದರಿಂದ, ಮಹಿಳೆಯರು ಯಾವುದೇ ರೀತಿಯ ಅಮಿಷಗಳಿಗೆ ಒಳಗಾಗಬಾರದು. ಒಂದು ವೇಳೆ ಯಾರಾದರೂ ಹಣಕ್ಕಾಗಿ ಬೇಡಿಕೆ ಇಟ್ಟಲ್ಲಿ, ತಕ್ಷಣವೇ ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಇವರಿಗೆ ನೇರವಾಗಿ ದೂರು ನೀಡಬಹುದು.

ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಯರು ಪ್ರತಿ ಮಾಹೆ ಮಂಜೂರಾಗಿ ಪಡೆಯುತ್ತಿರುವ ಸಹಾಯಧನವನ್ನು ರದ್ದುಪಡಿಸಲು ಬಯಸಿದಲ್ಲಿ, ಸ್ವಯಂಪ್ರೇರಿತರಾಗಿ ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ದಾವಣಗೆರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಾನಾಯ್ಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular