HomeKarnatakaಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ...

ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ರೂ. ಜಮಾ: ‘ಗೃಹಲಕ್ಷ್ಮಿ’ ಹಣ ಬಾರದ ಮಹಿಳೆಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ.

ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ 2 ಸಾವಿರ ರೂ.ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular