ಗೃಹಲಕ್ಷ್ಮಿ ಯೋಜನೆ ಅರ್ಜಿ ಶುಲ್ಕ ಪರಿಷ್ಕರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ.

ಈ ಹಿಂದಿನ ಸುತ್ತೋಲೆ ಹಿಂಪಡೆದು ದರ ಪರಿಷ್ಕರಣೆ ಮಾಡಲಾಗಿದೆ. ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆಯುವ ಪ್ರತಿ ನೋಂದಣಿಗೆ 10 ರೂ., ಮಂಜೂರಾತಿ ಪತ್ರಕ್ಕೆ 2 ರೂ. ನಿಗದಿಪಡಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ಶುಲ್ಕವನ್ನು ಗ್ರಾಮ ಪಂಚಾಯಿತಿಗಳಿಗೆ ವರ್ಗಾವಣೆ ಮಾಡುವ ಬಗ್ಗೆ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆದುಕೊಳ್ಳುವ ಗೃಹಲಕ್ಷ್ಮಿ ಯೋಜನೆಯ ಪ್ರತಿ ಅರ್ಜಿಗೆ 20 ರೂಪಾಯಿಯನ್ನು ಇಲಾಖೆಯಿಂದ ವರ್ಗಾವಣೆ ಮಾಡಲಾಗುವುದು ಎಂದು ಈ ಹಿಂದೆ ಸುತ್ತೋಲೆ ಹೊರಡಿಸಲಾಗಿತ್ತು. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಪ್ರತಿ ನೋಂದಣಿಗೆ 15 ರೂಪಾಯಿ, ಮಂಜೂರಾತಿ ಪತ್ರದ ಪ್ರತಿಗೆ 5 ರೂಪಾಯಿ ನೀಡಲು ತೀರ್ಮಾನಿಸಲಾಗಿತ್ತು,

ಬಾಪೂಜಿ ಸೇವಾ ಕೇಂದ್ರಕ್ಕೂ ಶುಲ್ಕ ಪಾವತಿ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆರ್ಥಿಕ ಇಲಾಖೆ ಪ್ರತಿ ನೋಂದಣಿಗೆ 10 ರೂ., ಮಂಜೂರಾತಿ ಪತ್ರದ ಪ್ರತಿಗೆ 2 ರೂ. ನಿಗದಿಪಡಿಸಿದ್ದು, ಈ ಹಿಂದೆ ಹೊರಡಿಸಿದ್ದ ಸುತ್ತೋಲೆ ಹಿಂಪಡೆದುಕೊಂಡು ಅರ್ಜಿ ಶುಲ್ಕ ಪರಿಷ್ಕರಣೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read