HomeKarnatakaಯಜಮಾನಿ ಖಾತೆಗೆ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನವೇ 60 ಸಾವಿರಕ್ಕೂ...

ಯಜಮಾನಿ ಖಾತೆಗೆ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನವೇ 60 ಸಾವಿರಕ್ಕೂ ಅಧಿಕ ಮಹಿಳೆಯರ ನೋಂದಣಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16 ರಿಂದ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ಜಮಾ ಮಾಡಲಾಗುವುದು.

ನಿನ್ನೆಯಷ್ಟೇ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿದ್ದು, ಯೋಚನೆ ನೋಂದಣಿಯ ಮೊದಲ ದಿನವಾದ ಇಂದು 60,000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆ ಅಡಿ 1.28 ಕೋಟಿ ಫಲಾನುಭವಿಗಳಿಗೆ ಮಾಸಿಕ ತಲಾ ಎರಡು ಸಾವಿರ ವಾರ್ಷಿಕ ಪ್ರತಿ ಫಲಾನುಭವಿಗೆ 24,000 ರೂ.ಗಳನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು

ಗೃಹಲಕ್ಷ್ಮಿ ಯೋಜನೆಗೆ ಮೊದಲ ದಿನ 60,222 ಮಹಿಳೆಯರಿಂದ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ ಮೊಬೈಲ್ ಆ್ಯಪ್ ಮೂಲಕ 15,276 ಹಾಗೂ ವೆಬ್ ಅಪ್ಲಿಕೇಶನ್ ಮೂಲಕ 44,946 ಮಹಿಳೆಯರಿಂದ ನೋಂದಣಿ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular