HomeKarnataka1 ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಉದ್ಘಾಟನೆಗೆ ರಾಹುಲ್ ಗಾಂಧಿ: ಸಿಎಂ...

1 ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಉದ್ಘಾಟನೆಗೆ ರಾಹುಲ್ ಗಾಂಧಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೊಂದು ವಿಭಾಗದಲ್ಲಿ ಒಂದೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರ್ಗಿಯಲ್ಲಿ ಗೃಹ ಜ್ಯೋತಿ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ, ಈಗ ಬೆಳಗಾವಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಯುವನಿಧಿ ಯೋಜನೆಯನ್ನು ಡಿಸೆಂಬರ್ ಇಲ್ಲವೇ ಜನವರಿಯಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಹರಿರುವ 1 ಕೋಟಿ 33 ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 1 ಕೋಟಿ‌ 6 ಲಕ್ಷ ನೊಂದಣಿಯಾಗಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಮಾಡಬೇಕಾದ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ಆಸೀಫ್ ಸೇಠ್ ಮತ್ತಿತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular