ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ ನೋಂದಣಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಲಕ್ಷ್ಮಿ ಯೋಜನೆಗೆ ಆ. 27 ರಂದು ಚಾಲನೆ ನೀಡಲಾಗುವುದು. ಈ ಯೋಜನೆಗೆ 1 ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಡಿನ ಒಂದು ಕೋಟಿಗೂ ಅಧಿಕ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿದ್ದಾರೆ. ಯಾರೊಬ್ಬರೂ ಯೋಜನೆಯ ಲಾಭದಿಂದ ವಂಚಿತರಾಗದೆ ಎಲ್ಲಾ ಅರ್ಹರನ್ನು ತಲುಪುವುದು ನಮ್ಮ ಉದ್ದೇಶ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕ್ರಾಂತಿಕಾರಕ ಹೆಜ್ಜೆಯಾದ ನಮ್ಮ ಈ ಯೋಜನೆಯನ್ನು ಯಶಸ್ವಿಯಾಗಿಸಲು ತಮ್ಮೆಲ್ಲರ ಸಹಕಾರವಿರಲಿ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/CMofKarnataka/status/1689582507300409346

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read