HomeKarnatakaಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ...

ಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ.  ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ.

ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧೀಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಗೆ ಕಾಲ್ ಮಾಡಿ ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular