ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಈಗಾಗಲೇ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಡುಗೆ ಅನಿಲ, ಟೋಲ್ ಶುಲ್ಕ, ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಮೊದಲು ಪ್ರತಿಭಟನೆ ನಡೆಸಲಿ. ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.