HomeKarnatakaಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಎರಡು ತಿಂಗಳ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಎರಡು ತಿಂಗಳ ಹಣ ಬಿಡುಗಡೆ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಈಗಾಗಲೇ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಡುಗೆ ಅನಿಲ, ಟೋಲ್ ಶುಲ್ಕ, ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಮೊದಲು ಪ್ರತಿಭಟನೆ ನಡೆಸಲಿ. ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular