HomeKarnataka'ಗೃಹಲಕ್ಷ್ಮಿ ಯೋಜನೆ' ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ 2000 ರೂ. ಜಮಾ ಶೀಘ್ರ

‘ಗೃಹಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ 2000 ರೂ. ಜಮಾ ಶೀಘ್ರ

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಗೆ ಸಾಫ್ಟ್ವೇರ್ ಮತ್ತು ಆ್ಯಪ್ ಸಿದ್ಧಪಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಅರ್ಜಿ ಬಿಡುಗಡೆ ಮಾಡಲಾಗುವುದು. ಯೋಜನೆಯ ತ್ವರಿತ ಅನುಷ್ಠಾನಕ್ಕೆ ತಾಂತ್ರಿಕ ತೊಂದರೆ ಉಂಟಾಗುತ್ತಿದ್ದು, ಸಾಫ್ಟ್ವೇರ್ ಮತ್ತು ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ. ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬಲ್ಲಿ ನಾಲ್ವರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಯಿಂದ 1.13 ಕೋಟಿ ಕುಟುಂಬಗಳಿಗೆ ಸೌಲಭ್ಯ ಸಿಗಲಿದೆ. ಯೋಜನೆ ಜಾರಿಯಾದ ಬಳಿಕ ಗೊಂದಲವಾಗಬಾರದು ಎನ್ನುವ ಕಾರಣಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡು ಸಾಫ್ಟ್ವೇರ್ ಸಿದ್ದಪಡಿಸಲಾಗುತ್ತಿದೆ. ಆದಷ್ಟು ಶೀಘ್ರವೇ ಗೃಹಲಕ್ಷ್ಮಿ ಯೋಜನೆಗೆ ಸಾಫ್ಟ್ವೇರ್ ಮತ್ತು ಅಪ್ಲಿಕೇಶನ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಮನೆಗೆ ಯಜಮಾನಿ ಖಾತೆಗೆ 2,000 ರೂ. ಜಮಾ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular