HomeKarnataka'ಗೃಹಲಕ್ಷ್ಮಿ' ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ.

2023ರ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ್ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದ್ದರು. ಅರ್ಹರು ಈಗಲೂ ಯೋಜನೆಯ ಫಲಾನುಭವಿಗಳಾಗಲು ಅವಕಾಶವಿದೆ. ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಒಬ್ಬ ಮಹಿಳೆಯರಿಗೆ ಯೋಜನೆ ಪ್ರಯೋಜನ ಸಿಗಲಿದೆ. ಆದಾಯ ತೆರಿಗೆ, ಜಿಎಸ್​ಟಿ ಪಾವತಿದಾರರು ಸೇರಿದಂತೆ ಶ್ರೀಮಂತರು ಯೋಜನೆಯ ಸೌಲಭ್ಯ ಪಡೆಯದಂತೆ ನಿಯಮಾವಳಿ ರೂಪಿಸಲಾಗಿದೆ.

ಬಜೆಟ್ ನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಯೋಜನೆಗೆ ಹಣಕಾಸು ಮುಗ್ಗಟ್ಟು ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 9.83 ಲಕ್ಷ ಫಲಾನುಭವಿಗಳಿದ್ದು, ಪ್ರಥಮ ಸ್ಥಾನದಲ್ಲಿದೆ. 1.15 ಲಕ್ಷ ಫಲಾನುಭವಿ ಮಹಿಳೆಯರು ಇರುವ ಕೊಡಗು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 8.20 ಲಕ್ಷ ಫಲಾನುಭವಿಗಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular