HomeKarnataka‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ಜಮಾ ಯೋಜನೆ ಜಾರಿಗೆ ಗೌರವಧನ ಆಧಾರದಲ್ಲಿ ಪ್ರಜಾಪ್ರತಿನಿಧಿಗಳ...

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ಜಮಾ ಯೋಜನೆ ಜಾರಿಗೆ ಗೌರವಧನ ಆಧಾರದಲ್ಲಿ ಪ್ರಜಾಪ್ರತಿನಿಧಿಗಳ ನೇಮಕ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ.

ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.

ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು.

ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯವಲ್ಲ, ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿರದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular