HomeLatest Newsರೈತರಿಗೆ ನೀಡಿದ ಪರಿಹಾರದ ಹಣಕ್ಕೆ GST ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ರೈತರಿಗೆ ನೀಡಿದ ಪರಿಹಾರದ ಹಣಕ್ಕೆ GST ವಿಧಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಭಿವೃದ್ಧಿ ಯೋಜನೆಗಳಿಗಾಗಿ ಭೂಮಿ ನೀಡಿದ ರೈತರಿಗೆ ವಿತರಿಸುವ ಪರಿಹಾರದ ಹಣಕ್ಕೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್​ಟಿ) ವಿಧಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಬೆಂಗಳೂರು ಮೆಟ್ರೋ ರೈಲು ಯೋಜನೆಗೆ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ತಮ್ಮಿಂದ ವಶಪಡಿಸಿಕೊಂಡ ಜಮೀನಿಗೆ ವಿತರಿಸಿದ ಪರಿಹಾರಕ್ಕೆ ಜಿ.ಎಸ್.ಟಿ. ಪಾವತಿಸುವಂತೆ ಸೂಚಿಸಿ ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಶೋಕಾಸ್ ನೋಟಿಸ್ ಪ್ರಶ್ನಿಸಿ ಆಶಾ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನ್ಯಾಯಪೀಠ, ಅರ್ಜಿದಾರ ರೈತರಿಗೆ ಇಷ್ಟವಿಲ್ಲದಿದ್ದರೂ ಅವರ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಭೂಮಿ ಕಳೆದುಕೊಂಡಿರುವ ಮತ್ತು ಭೂಮಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ರೈತರಿಗೆ ಪರ್ಯಾಯವಾಗಿ ನಷ್ಟ ಪರಿಹಾರ ನೀಡಲಾಗುತ್ತದೆ. ಈ ಒಪ್ಪಂದ ಪ್ರಕ್ರಿಯೆಯಲ್ಲಿ ಹಲವು ಷರತ್ತು ಒಳಗೊಂಡಿರಬಹುದು. ಅದಕ್ಕೂ ಅರ್ಜಿದಾರರಿಗೆ ನೀಡುವ ಪರಿಹಾರದ ಮೊತ್ತಕ್ಕೂ ಸಂಬಂಧವಿಲ್ಲ ಎಂದು ಹೈಕೋರ್ಟ್ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular