HomeBusinessರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ: ಜನವರಿಯಲ್ಲಿ 11,317 ಕೋಟಿ ರೂ. ಕಲೆಕ್ಷನ್

ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ: ಜನವರಿಯಲ್ಲಿ 11,317 ಕೋಟಿ ರೂ. ಕಲೆಕ್ಷನ್

ಬೆಂಗಳೂರು: ರಾಜ್ಯದಲ್ಲಿ ಜನವರಿ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆಯ 11,317 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಕೊರೋನಾ ನಂತರ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುತ್ತಿರುವುದರ ಸಂಕೇತ ಇದಾಗಿದೆ.

ಫೆಬ್ರವರಿ 17 ರಂದು ಬಜೆಟ್ ಮಂಡನೆಗೆ ಮೊದಲು ಈ ಅಂಕಿ ಅಂಶಗಳು ಉತ್ತೇಜನಕಾರಿಯಾಗಿವೆ ಎಂದು ಹೇಳಲಾಗಿದೆ. ಡಿಸೆಂಬರ್ ನಲ್ಲಿ 10,061 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು. ಜನವರಿಯಲ್ಲಿ 11,317 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

6085 ಕೋಟಿ ರೂ ಜ್ಯದ ಪಾಲಿನ ಜಿಎಸ್‌ಟಿಯಾಗಿದೆ. 5231 ಕೋಟಿ ರೂ. ಕೇಂದ್ರದ ಪಾಲಿನ ಜಿಎಸ್‌ಟಿ ಸಂಗ್ರಹವಾಗಿದೆ. ಇದಲ್ಲದೆ, 107.5 ಕೋಟಿ ರೂಪಾಯಿ ವೃತ್ತಿಪರ ತೆರಿಗೆ, 1,716 ಕೋಟಿ ರೂಪಾಯಿ ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆ ಸಂಗ್ರಹವಾಗಿದ್ದು, ಎಲ್ಲಾ ತೆರಿಗೆಗಳು ಸೇರಿದಂತೆ ಒಟ್ಟಾರೆ 13,141 ಕೋಟಿ ರೂಪಾಯಿ ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ,

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇಕಡ 30ರಷ್ಟು ಬೆಳವಣಿಗೆ ಪ್ರಮಾಣ ಹೊಂದಿದ್ದು, ಅತ್ಯಧಿಕ ಬೆಳವಣಿಗೆಯ ರಾಜ್ಯವಾಗಿ ಮುಂದುವರೆದಿದೆ ಎಂದು ಹೇಳಿದ್ದಾರೆ. ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ ಹೆಚ್ಚಿನ ಕಣ್ಗಾವಲು ಆರ್ಥಿಕತೆಯಲ್ಲಿ ಚೇತರಿಕೆ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದ ಈ ಸಾಧನೆ ಸಾಧ್ಯವಾಗಿದೆ. ಆದಾಯ ಬೆಳವಣಿಗೆಯಿಂದ ಸರ್ಕಾರ ಉತ್ತಮ ಬಜೆಟ್ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular