HomeBusinessBIG NEWS: 15% ರಷ್ಟು ಏರಿಕೆಯಾಗಿ ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ

BIG NEWS: 15% ರಷ್ಟು ಏರಿಕೆಯಾಗಿ ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ: ನವೆಂಬರ್‌ನಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಅತ್ಯಧಿಕ ಜಿಗಿತ ದಾಖಲಿಸಿದೆ ಎಂದು ಸರ್ಕಾರ ಹೇಳಿದೆ.

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹಗಳು ನವೆಂಬರ್‌ನಲ್ಲಿ ಶೇ 15 ರಷ್ಟು ಏರಿಕೆಯಾಗಿ 1.67 ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 2023 ರ GST ಆದಾಯ ಸಂಗ್ರಹವು ಸುಮಾರು 1.68 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆ ಕಂಡಿದ್ದು, ಇದು ವಾರ್ಷಿಕ ಆಧಾರದ ಮೇಲೆ 15% ಜಿಗಿತವಾಗಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. FY24 ರಲ್ಲಿ ಒಟ್ಟು GST ಸಂಗ್ರಹವು ಆರನೇ ಬಾರಿಗೆ 1.6 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ.

“ನವೆಂಬರ್, 2023 ರಲ್ಲಿ ಒಟ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಆದಾಯವು 1,67,929 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಸಿಜಿಎಸ್‌ಟಿ 30,420 ಕೋಟಿ ರೂ., ಎಸ್‌ಜಿಎಸ್‌ಟಿ 38,226 ಕೋಟಿ ರೂ., ಐಜಿಎಸ್‌ಟಿ 87,009 ಕೋಟಿ ರೂ. ಆಗಿದೆ.

ತಿಂಗಳಿನಲ್ಲಿ, ದೇಶೀಯ ವಹಿವಾಟುಗಳಿಂದ(ಸೇವೆಗಳ ಆಮದು ಸೇರಿದಂತೆ) ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ 20% ಹೆಚ್ಚಾಗಿದೆ. ಎಫ್‌ವೈ 24 ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ಆರನೇ ಬಾರಿಗೆ 1.60 ಲಕ್ಷ ಕೋಟಿ ರೂ. ದಾಟಿದೆ ಎಂದು ಸಚಿವಾಲಯ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular