ಬೆಂಗಳೂರು ಸೇರಿ ಹಲವೆಡೆ ದಾಳಿ: 3200 ಕೋಟಿ ರೂ. GST ವಂಚನೆ ಪತ್ತೆ

ಬೆಂಗಳೂರು: ಬೆಂಗಳೂರು ಮತ್ತು ಮುಂಬೈನ 30ಕ್ಕೂ ಅಧಿಕ ಸ್ಥಳಗಳಲ್ಲಿ ಬುಧವಾರ ದಾಳಿ ಮಾಡಿದ ಕೇಂದ್ರ ಜಿಎಸ್‌ಟಿ ಗುಪ್ತಚರ ಮಹಾನ್ ನಿರ್ದೇಶನಾಲಯ(ಡಿಜಿಜಿಐ) ಅಧಿಕಾರಿಗಳು 3200 ಕೋಟಿ ರೂ. ಜಿಎಸ್​ಟಿ ವಂಚನೆಯನ್ನು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು ವಲಯದ ಹೆಚ್ಚುವರಿ ಪ್ರಧಾನ ನಿರ್ದೇಶಕಿ ಸುಚೇತಾ ಶ್ರೀಜೆಷಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಆರೋಪಿಗಳು ನಕಲಿ ಕಂಪನಿಗಳನ್ನು ಸೃಷ್ಟಿಸಿ ವಂಚನೆಯಲ್ಲಿ ತೊಡಗಿರುವುದು ದಾಳಿಯ ಸಂದರ್ಭದಲ್ಲಿ ಗೊತ್ತಾಗಿದೆ. ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಮೂಲಕ 665 ಕೋಟಿ ರೂಪಾಯಿ ಪಡೆದಿದ್ದಾರೆ. ನಕಲಿ ಇನ್ವಾಯ್ಸ್ ಸೃಷ್ಟಿಸಿ ವಂಚನೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಈ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಲ್ಲಿ ನಡೆದ ತಪಾಸಣೆಯ ಸಂದರ್ಭದಲ್ಲಿ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಹಲವು ಕಂಪನಿಗಳನ್ನು ನಿರ್ವಹಣೆ ಮಾಡುತ್ತಿರುವುದು ಕಂಡು ಬಂದಿದೆ. ಈ 15 ನಕಲಿ ಕಂಪನಿಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇವುಗಳ ಪೈಕಿ 9 ಕಂಪನಿಗಳು ಷೇರುಪೇಟೆಯಲ್ಲಿ ನೋಂದಾವಣೆಯಾಗಿರುವುದು ಕೂಡ ಗೊತ್ತಾಗಿದೆ. ಈ ಕಂಪನಿಗಳು 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಎಫ್ಎಂಸಿಜಿ ಸರಕುಗಳನ್ನು ಸ್ವೀಕರಿಸಿವೆ ಎಂದು ದಾಖಲೆಗಳನ್ನು ಸೃಷ್ಟಿಸಿ ವಂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read