HomeLatest Newsಜಿ.ಎಸ್‌.ಟಿ. ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ, ಬೇರೆ ರಾಜ್ಯದಲ್ಲಿ ನೋಟಿಸ್ ನೀಡಿಲ್ಲ: ಪ್ರಹ್ಲಾದ್ ಜೋಶಿ

ಜಿ.ಎಸ್‌.ಟಿ. ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ, ಬೇರೆ ರಾಜ್ಯದಲ್ಲಿ ನೋಟಿಸ್ ನೀಡಿಲ್ಲ: ಪ್ರಹ್ಲಾದ್ ಜೋಶಿ

ಬೆಂಗಳೂರು: ಸಣ್ಣಪುಟ್ಟ ವ್ಯಾಪಾರಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೆರಿಗೆ ನೋಟಿಸ್ ನೀಡಿದೆ. ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ.ಎಸ್‌.ಟಿ. ನೋಟಿಸ್ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಜಿ.ಎಸ್.ಟಿ. ಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ಸಿ.ಜಿ.ಎಸ್.ಟಿ. ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ಎಸ್‌.ಜಿ.ಎಸ್.ಟಿ. ಎಂಬ ಎರಡು ಭಾಗಗಳಿವೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.

ಜಿ.ಎಸ್‌.ಟಿ. ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ ಮೂರನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. ಮೂರನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗುತ್ತದೆ. ಬೇರೆ ಯಾವುದೇ ರಾಜ್ಯಗಳಲ್ಲಿ ಈ ರೀತಿ ನೋಟಿಸ್ ನೀಡಿಲ್ಲ. ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಈಗ ಕೇಂದ್ರದತ್ತ ಬೊಟ್ಟು ಮಾಡಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular