HomeLatest NewsGST ಶಾಕ್: ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಒದಗಿಸಲು ಬಸವರಾಜ ಬೊಮ್ಮಾಯಿ ಒತ್ತಾಯ

GST ಶಾಕ್: ಸಣ್ಣ ವ್ಯಾಪಾರಿಗಳಿಗೆ ಪರಿಹಾರ ಒದಗಿಸಲು ಬಸವರಾಜ ಬೊಮ್ಮಾಯಿ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್​ಟಿ ಶಾಕ್ ನೀಡಿದೆ. ಇದು ಖಂಡನೀಯ. ಜಿಎಸ್‌ಟಿ ಕಾನೂನಿನಡಿಯಲ್ಲಿ ವ್ಯಾಪಾರ ವಹಿವಾಟು ನಡೆಸಲು ಕೆಲವು ರಿಯಾಯಿತಿಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಕೂಡಲೇ ವ್ಯಾಪಾರಸ್ಥರಿಗೆ ಪರಿಹಾರ ಒದಗಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿ.ಎಸ್.ಟಿ. ಶಾಕ್ ಕೊಟ್ಡಿರುವಂಥದ್ದು ಅತ್ಯಂತ ಖಂಡನೀಯ. ಜಿ.ಎಸ್.ಟಿ. ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯ್ತಿ ಇದೆ. ಆ ರಿಯಾಯಿತಿ ನಂತರ ತೆರಿಗೆ ಕಟ್ಟಬೇಕೆಂಬ ಪದ್ದತಿ ಇದೆ.

ಈ ವಿಚಾರದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ದುಡುಕಿ ಹಲವಾರು ವರ್ಷದ ತೆರಿಗೆ ಅದರ ಮೇಲೆ ಬಡ್ಡಿ ಮತ್ತು ಇತರ ಚಾರ್ಜ್ ಹಾಕಿ ಸಣ್ಣ ಬೀದಿ ಬದಿ ವ್ಯಾಪಾರಸ್ಥರ ಮೇಲೆ ದೊಡ್ಡ ಹೊರೆ ಹೊರಿಸಿ ಅವರು ವ್ಯಾಪಾರ ಮುಚ್ಚುವ ಪರಿಸ್ಥಿತಿಗೆ ತಂದಿರುವುದು ಯಾರೂ ಕೂಡ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಬಂಧ ಪಟ್ಟ ಸಣ್ಣ ವ್ಯಾಪಾರಿಗಳ ಪ್ರತಿನಿದಿಗಳನ್ನು ಕರೆದು ಚರ್ಚೆ ಮಾಡಿ ಅವರಿಗೆ ಎಲ್ಲ ರೀತಿಯ ರಿಯಾಯಿತಿಗಳನ್ನು ಕೊಟ್ಟು ಕರ ಸಮಾಧಾನ ಯೋಜನೆ ಅಡಿಯಲ್ಲಿ ಯಾವ ರೀತಿ ತೆರಿಗೆದಾರರಿಗೆ ಸಹಾಯ ಮಾಡುತ್ತೇವೊ ಅದೇ ರೀತಿ ಅವರಿಗೂ ಸಹಾಯ ಮಾಡಬೇಕು. ಬೇರೆ ರಾಜ್ಯಗಳಲ್ಲಿ ಈ ವಿಚಾರದಲ್ಲಿ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಸಣ್ಣ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಆ ಕ್ರಮ ಇಲ್ಲಿ ಕೂಡ ಅನ್ವಯಿಸಬೇಕೆಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ತರಿಗೆ ಪರಿಹಾರ ಒದಗಿಸಬೇಕು. ರಾಜ್ಯದಲ್ಲಿ ಹಣಕಾಸಿನ ತೊಂದರೆಯಾಗಿ ಬೊಕ್ಕಸ ಖಾಲಿಯಾಗಿರುವುದು ಮತ್ತು ಈ ವರ್ಷದ ಮೊದಲನೇಯ ತ್ರೈಮಾಸಿಕ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಗಾಬರಿಯಿಂದ ತೀವ್ರವಾದ ಕ್ರಮಕ್ಕೆ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular