HomeLive NewsBIG NEWS: ಜಿಎಸ್‌ಟಿ: ರಾಜ್ಯಕ್ಕೆ ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟ:...

BIG NEWS: ಜಿಎಸ್‌ಟಿ: ರಾಜ್ಯಕ್ಕೆ ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟ: ಸಿಎಂ ಸಿದ್ದರಾಮಯ್ಯ ಮಾಹಿತಿ

ಹಾವೇರಿ: ಜಿಎಸ್‌ಟಿ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರ್ಷ ಕರ್ನಾಟಕಕ್ಕೆ 5 ರಿಂದ 6 ಸಾವಿರ ಕೋಟಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರವೇ ಜಿಎಸ್‌ಟಿ ಜಾರಿಗೆ ತಂದು ಎಂಟು ವರ್ಷ 24% ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದರು. ಕರ್ನಾಟಕ ರಾಜ್ಯವೊಂದಕ್ಕೆ ಒಂದು ವರ್ಷಕ್ಕೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ. ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟವಾಗುತ್ತದೆ. ಇದಕ್ಕೆಲ್ಲ ಯಾರು ಹೊಣೆ? ಎಂದು ಪ್ರಶ್ನಿಸಿದರು.

ನಾಲ್ಕೂವರೆ ಲಕ್ಷ ಕೋಟಿ ತೆರಿಗೆಯನ್ನು ನಾವು ಕೊಡುತ್ತೇವೆ. ನಮಗೆ ಕೊಡುವುದು 60ರಿಂದ 70 ಸಾವಿರ ಕೋಟಿ ಮಾತ್ರ. ಒಂದು ರೂ ಕೊಟ್ಟರೆ 14 ಪೈಸೆ ವಾಪಸ್ಸು ಬರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡಲಿಲ್ಲ. 5495 ಕೋಟಿ ರಾಜ್ಯಕ್ಕೆ ಒದಗಿಸಲು 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಅದನ್ನೂ ಕೊಡಲಿಲ್ಲ. ಪೆರಿಫೆರಲ್ ರಿಂಗ್ ರೋಡಿಗೆ 3000 ಕೋಟಿ, ಬೆಂಗಳೂರಿನ ಕೆರೆಯ ಅಭಿವೃದ್ಧಿಗೆ 3000 ಕೋಟಿ ಕೊಡಲಿಲ್ಲ. ಏನೂ ಕೊಡಲಿಲ್ಲ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಏಕೆ ಪೂರ್ಣಗೊಳಿಸಲಿಲ್ಲ? ಇದನ್ನು ನಾವು ಅಧಿಕಾರಕ್ಕೆ ಬಂದು ಪೂರ್ಣಗೊಳಿಸಿದ್ದೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular