BREAKING NEWS: ಗ್ಯಾರಂಟಿ ಬಗ್ಗೆ ಅಪಸ್ವರವೆತ್ತುವ ಶಾಸಕರಿಗೆ ಎಚ್ಚರಿಕೆ: ಶೋಕಾಸ್ ನೋಟೀಸ್ ಜಾರಿ ಮಾಡುತ್ತೇವೆ ಎಂದ ಡಿಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಸೇರಿ ಎರಡು ಗ್ಯಾರಂಟಿಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ಗವಿಯಪ್ಪ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಜನರಿಗೆ ಭರವಸೆ ಕೊಟ್ಟು ಗ್ಯಾರಂಟಿ ಜಾರಿ ಮಾಡಿದ್ದೇವೆ. ಅದನ್ನು ನಡೆಸಿಕೊಂಡು ಹೋಗುತ್ತೇವೆ. ಐದು ಗ್ಯಾರಂಟಿಗಳು ಮುಂದುವರೆಯುತ್ತವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತುವ ಶಾಸಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುತ್ತೇವೆ. ಗವಿಯಪ್ಪ ಇರಲಿ, ಯಾರೇ ಇರಲಿ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು. ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಗವಿಯಪ್ಪ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read