HomeKarnatakaBIG NEWS: ಗ್ಯಾರಂಟಿ ಯೋಜನೆಯ ಪರಿಷ್ಕರಣೆಯ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

BIG NEWS: ಗ್ಯಾರಂಟಿ ಯೋಜನೆಯ ಪರಿಷ್ಕರಣೆಯ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ರದ್ದು ಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟಪಡಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅಂತಹ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವುದಾಗಿ ನಾನೆಲ್ಲೂ ಹೇಳಿಯೇ ಇಲ್ಲ. ನನ್ನ ಹೇಳಿಕೆಗಳನ್ನು ತಿರುಚಲಾಗಿದೆ ಎಂದರು.

ಶಕ್ತಿ ಯೋಜನೆ ಮಾತ್ರವಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ಜನರಿಗೆ ಅಂತಹ ಯಾವುದೇ ಗೊಂದಲಗಳು ಬೇಡ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular