HomeKarnatakaBREAKING: ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ತೊಂದರೆ ಆಗಬಾರದು: ಸಿಎಂ...

BREAKING: ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ತೊಂದರೆ ಆಗಬಾರದು: ಸಿಎಂ ಡಿ.ಕೆ.ಶಿವಕುಮಾರ್ ತಾಕೀತು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಗೃಹ ಲಕ್ಷ್ಮೀ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ನೀಡಿದ್ದಾರೆ.

ಒಬ್ಬನೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳು, ಯೋಜನೆಯ ದುರುಪಯೋಗಕ್ಕೆ ಮಾತ್ರ ಬ್ರೇಕ್‌ ಹಾಕಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಹಲವು ಫಲಾನುಭವಿಗಳು ಬ್ಯಾಂಕ್‌ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಜ್ಯೋತಿ ಗ್ಯಾರಂಟಿ ಯೋಜನೆ ಜಾರಿ ಆಗುವಾಗ ಹೆಚ್ಚಿನ ದುರುಪಯೋಗ ಆಗದ ಹಾಗೆ ಎಚ್ಚರಿಕೆ ವಹಿಸಿದ್ದರು. ಇದೇ ಎಚ್ಚರಿಕೆ ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗದ ಪ್ರಮಾಣ ಕಡಿಮೆ ಆಗುತ್ತಿತ್ತು ಎಂದಿದ್ದಾರೆ.

ಮೃತಪಟ್ಟಿರುವ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಹಣ ಹೋಗುತ್ತಿರುವುದನ್ನು ಪತ್ತೆಯಾಗಿದೆ. ಈ ರೀತಿ ದುರುಪಯೋಗ ಆಗಬಾರದು. ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ವಾಯ್ಸ್‌ ಮೆಸ್ಸೇಜ್‌ ಮೂಲಕ ಖಚಿತಪಡಿಸಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಜರುಗಿದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾದ ಪ್ರಮುಖ ಅಂಶಗಳು:

ಏರ್‌ಟೆಲ್‌ ಆಪ್ ಬ್ಯಾಂಕ್‌ನಲ್ಲಿ (ಏರ್ಟೆಲ್ ಸಿಮ್ ಬಳಕೆದಾರರು ತೆರೆಯಲು ಅವಕಾಶವಿರುವ ಖಾತೆ) ಯುಪಿಎ ಖಾತೆಗಳನ್ನು ತೆಗೆದು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಪತ್ತೆಯಾಗಿವೆ ಎನ್ನುವ ಬಗ್ಗೆ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಖಾತೆಗಳು ಕರ್ನಾಟಕ ರಾಜ್ಯದಲ್ಲಿ ಮಾತ್ರ ಇರಬೇಕು. ಇತರೆ ರಾಜ್ಯಗಳಲ್ಲಿರುವ ಖಾತೆಗಳಿಗೆ ಹಣ ಹೋಗುತ್ತಿರುವುದು ಪತ್ತೆಯಾಗಿದೆ. ಇವುಗಳಿಗೆ ತಡೆ ಹಾಕಬೇಕು.

ನಮ್ಮ ರಾಜ್ಯದ ಯೋಜನೆಗಳು ನಮ್ಮ ರಾಜ್ಯದ ಫಲಾನುಭವಿಗಳಿಗೆ ಮಾತ್ರ ಸಿಗಬೇಕು. ಇತರೆ ರಾಜ್ಯದ ಮತದಾರರಿಗೆ ಯೋಜನೆಯ ಲಾಭ ಆಗುತ್ತಿದೆ. ಇದನ್ನು ತಡೆಯಬೇಕು.

ಅನುಕೂಲಸ್ಥರು ಯಾರಾದರೂ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟು ಕೊಡುವ ಮೂಲಕ ಇತರೆ ಅರ್ಹ ಫಲಾನುಭವವಿಗಳಿಗೆ ನೆರವಾಗಲು ಮುಂದಾದರೆ ಅಂಥವರನ್ನು ಪ್ರೋತ್ಸಾಹಿಸಬೇಕು.

ಕೇಂದ್ರದ ನೀತಿಗಳಿಂದ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆ, ಬೆಲೆ ಏರಿಕೆಯ ಪರಿಣಾಮಗಳು ಮತ್ತು ತಲಾ ಆದಾಯ ಕುಸಿಯುತ್ತಿರುವುದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಗೃಹಲಕ್ಷ್ಮಿ ಯೋಜನೆ ಜಾರಿಯಲ್ಲಿ ಬರುತ್ತಿರುವ ಎರಡು ಪ್ರಮುಖ ತಾಂತ್ರಿಕ ಸಮಸ್ಯೆಗಳ ಬಗ್ಗೆ ಕೂಲಂಕುಷ ಚರ್ಚೆ ನಡೆಸಲಾಯಿತು.

ಮರಣ ಹೊಂದಿದ ಫಲಾನುಭವಿಗಳ ಸಂಖ್ಯೆ ಸಕಾಲದಲ್ಲಿ ದೊರೆಯದಿರುವ ಬಗ್ಗೆ ಇ-ಕೆವೈಸಿ ಹಾಗೂ ಬ್ಯಾಂಕ್‌ ಖಾತೆ/ಎನ್‌.ಪಿ.ಸಿ.ಐ ನಿಷ್ಕ್ರಿಯವಾಗಿರುವ ಫಲಾನುಭವಿಗಳ ಕುರಿತಂತೆ ಚರ್ಚೆ ನಡೆಸಲಾಯಿತು.

ಆಡಿಟರ್‌ ಜನರಲ್‌ ವರದಿಯಲ್ಲಿ ಉಲ್ಲೇಖವಾಗಿರುವ ಈ ಕೆಳಗಿನ ಸಂಗತಿಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಒಂದೇ ಖಾತೆಯಲ್ಲಿ ಹಲವು ಫಲಾನುಭವಿಗಳು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಮೂರು ಲಕ್ಷ ಕಂತುಗಳಲ್ಲಿ ಒಟ್ಟು 60 ಕೋಟಿ ರೂಪಾಯಿ ಹಣ ಹೋಗಿದೆ ಎನ್ನುವ ಬಗ್ಗೆ ಎಜಿ ಅವರ ವರದಿ ಬಂದಿದೆ.

ಒಬ್ಬರೇ ಹಲವು ಖಾತೆಗಳನ್ನು ನೋಂದಾಯಿಸಿರುವುದನ್ನು ಎಜಿ ವರದಿಯಲ್ಲಿ ಉಲ್ಲೇಖವಾಗಿದೆ.

ಹಿಂದೆ ಪಡೆದ ಅರ್ಜಿಗಳಲ್ಲಿ ಉಲ್ಲೇಖವಾಗಿರುವ ಅಂಶಗಳ ನೈಜತೆ ಬಗ್ಗೆ ಪರಿಶೀಲನೆ ನಡೆಸದಿರುವ ಬಗ್ಗೆ ಪ್ರಸ್ತಾಪಿಸಲಾಯಿತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular