BIG NEWS : ‘ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ – ಮನೆಗೆ ತಲುಪಿಸಿದ್ದೇನೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದಿದ್ದಾರೆ.

ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ. ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read