HomeKarnatakaBIG NEWS: ಗ್ಯಾರಂಟಿ ಯೋಜನೆಗಳು ನಮ್ಮ 'ಕೈ' ಹಿಡಿಯುತ್ತೆ; ಸಚಿವ ಈಶ್ವರ ಖಂಡ್ರೆ ವಿಶ್ವಾಸ

BIG NEWS: ಗ್ಯಾರಂಟಿ ಯೋಜನೆಗಳು ನಮ್ಮ ‘ಕೈ’ ಹಿಡಿಯುತ್ತೆ; ಸಚಿವ ಈಶ್ವರ ಖಂಡ್ರೆ ವಿಶ್ವಾಸ

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ | udayavani

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮನ್ನು ಬೆಂಬಲಿಸಿದ್ದಾರೆ. ಹೀಗಾಗಿ ಕನಿಷ್ಠ 20 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗಳಿಸುವುದಲ್ಲದೆ ಕೇಂದ್ರದಲ್ಲೂ ಅಧಿಕಾರಕ್ಕೆ ಬರಲಿದೆ ಎಂದ ಅವರು, ಇದೇ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ನಮ್ಮ ಪೊಲೀಸರು ಸಮರ್ಥರಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular