HomeKarnatakaಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ.

ದೀಪಾ (34) ಮೃತ ಉಪನ್ಯಾಸಕಿ. ಸೋಮಶೇಖರ್ ಹಾಗೂ ಭಾಗ್ಯಾ ದಂಪತಿಯ ಪುತ್ರಿ. ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅವಿವಾಹಿತರಾಗಿದ್ದ ದೀಪಾ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತಿಥಿ ಉಪನ್ಯಾಸಕಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular