HomeKarnatakaಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ...

ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು: ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಸೇವೆ ಕಾಯಂಗೆ ಆಗ್ರಹಿಸಿ ಇಂದಿನಿಂದ ಬೆಂಗಳೂರಿಗೆ ಪಾದಯಾತ್ರೆ

ಬೆಂಗಳೂರು: ಸರ್ಕಾರದ ಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು ಸೇವೆ ಕಾಯಂಗೆ ಆಗ್ರಹಿಸಿ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಇಂದು ತುಮಕೂರಿನಿಂದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಆರಂಭವಾಗಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗಾಗಿ ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. 10 -15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಪರ್ಯಾಯ ವ್ಯವಸ್ಥೆ ಬೆದರಿಕೆ ಅಸ್ತ್ರಕ್ಕೆ ಜಗ್ಗದೇ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳಿಂದ ಸೇವೆ ಕಾಯಂಗೆ ಆಗ್ರಹಿಸಿ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular