HomeKarnatakaಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ: ಹೊಸದಾಗಿ ನೇಮಕಾತಿಗೆ ಸೂಚನೆ

ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ: ಹೊಸದಾಗಿ ನೇಮಕಾತಿಗೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2022 -23ನೇ ಸಾಲಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 3ರಂದು ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರದ ಮಾಹಿತಿ ಪ್ರಕಟಿಸಬೇಕಿದೆ. ಫೆಬ್ರವರಿ 4ರಿಂದ 8ರವರೆಗೆ ಅಂತಿಮ ಮೆರಿಟ್ ಪಟ್ಟಿಯ ಅನ್ವಯ ವಿಷಯವಾರು ಆನ್ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ ಫೆಬ್ರವರಿ 9 ರಂದು ಆಯ್ಕೆ ಪಟ್ಟಿ ಪ್ರಕಟಿಸಬೇಕು. ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳು ಫೆಬ್ರವರಿ 10 ರಿಂದ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಾವು ಸಲ್ಲಿಸಿರುವ ಮಾಹಿತಿಯಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ ಫೆಬ್ರವರಿ 2ರ ಸಂಜೆ 5 ಗಂಟೆಯೊಳಗೆ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನಂತರ ಯಾವುದೇ ತಿದ್ದುಪಡಿ ಮನವಿ ಪರಿಗಣಿಸುವುದಿಲ್ಲ. ಆಯ್ಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು http://dce.karnataka.gov.in ನಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular