ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳ

ಬೆಳಗಾವಿ:  ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ ಪರವಾಗಿ ಸುನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಅತಿಥಿ ಉಪನ್ಯಾಸಕರು ಗೌರವಧನ ಹೆಚ್ಚಳಕ್ಕೆ ಪ್ರತಿಭಟನೆ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ 12 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಿದದ್ದು, ಕನಿಷ್ಠ ವೇತನಕ್ಕಿಂತಲೂ ಕಡಿಮೆ ಇದೆ. ತಾವು ಬಂಗಾರಪ್ಪ ಅವರ ಪುತ್ರರಾಗಿರುವುದರಿಂದ ಅವರಂತೆಯೇ ಧಾರಾಳವಾಗಿ ತೀರ್ಮಾನ ಮಾಡಬೇಕೆಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಹಣಕಾಸು ಇಲಾಖೆ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಪ್ರಸ್ತಾವನೆ ತಿರಸ್ಕರಿಸಿದೆ. ಗೌರವಧನ ಹೆಚ್ಚಳ ಮಾಡಬೇಕೆಂಬ ಇಚ್ಛೆ ನಮಗೂ ಇದೆ. ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read