HomeKarnatakaBIG NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

BIG NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ಕೆಲ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.

ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕರ ನಿಯೋಗ ಸಚಿವ ಎಂ.ಸಿ.ಸುಧಾಕರ್ ಹಾಗೂ ಮಾಜಿ ಎಂಎಲ್ ಸಿ ಪುಟ್ಟಣ್ಣ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಮಾಡಲು ಸಮ್ಮತಿ ಸೂಚಿಸಿದರು. ಅತಿಥಿ ಉಪನ್ಯಾಸಕರ ಗೌರವ ಧನ 5 ಸಾವಿರದಿಂದ 8 ಸಾವಿರಕ್ಕೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಪ್ರತಿಭಟನೆ ಹಿಂಪಡೆಯುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular