ವಾರಾಂತ್ಯದಲ್ಲಿ ಮಾರ್ಗದರ್ಶಕ ಪ್ರವಾಸ: ಕಬ್ಬನ್ ಪಾರ್ಕ್ ನಲ್ಲಿ ಉದ್ಯಾನದ ಇತಿಹಾಸ, ಪರಂಪರೆ ಬಗ್ಗೆ ಅರಿವು

ಬೆಂಗಳೂರು: ಕಬ್ಬನ್‌ ಉದ್ಯಾನದಲ್ಲಿರುವ ಸಸ್ಯ ಪ್ರಭೇದಗಳು, ಜೀವವೈವಿಧ್ಯಗಳು ಹಾಗೂ ಐತಿಹಾಸಿಕ ಸ್ಥಳಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ ‘ಕಬ್ಬನ್‌ ನಡಿಗೆʼ ಆರಂಭಿಸಲಾಗಿದೆ.

ಕಬ್ಬನ್‌ ಉದ್ಯಾನದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಕಬ್ಬನ್‌ ವಾಕ್ಸ್‌ ಇರಲಿದೆ. ಇದಕ್ಕಾಗಿ 10 ಮಂದಿ ಪರಿಸರ ತಜ್ಞರನ್ನು ಮಾರ್ಗದರ್ಶಕರನ್ನಾಗಿ ನೇಮಿಸಲಾಗಿದೆ. ಮಾರ್ಗದರ್ಶಕರು ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ. 30 ಜನರನ್ನು ಒಳಗೊಂಡ ಒಂದು ತಂಡಕ್ಕೆ ಒಬ್ಬ ಮಾರ್ಗದರ್ಶಕರ ನಿಯೋಜನೆ. ವಯಸ್ಕರಿಗೆ 200 ರೂ., ಮಕ್ಕಳಿಗೆ 50 ರೂ. ದರ ನಿಗದಿಪಡಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕವೇ ನೋಂದಣಿ ಮಾಡಿಕೊಳ್ಳಬೇಕು.

ಪ್ರತಿ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 7.30ಕ್ಕೆ ಕಬ್ಬನ್‌ ವಾಕ್ಸ್‌ ಪ್ರಾರಂಭವಾಗಲಿದೆ. ಕಬ್ಬನ್‌ ಉದ್ಯಾನದ ಬಗ್ಗೆ ಮಾಹಿತಿ ಪಡೆಯಬೇಕೆಂಬ ಆಸಕ್ತಿಯಿರುವವರು https://walk.cubbonpark.in ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read