BIG NEWS : ಬೆಂಗಳೂರಿನಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಆಚರಣೆಗೆ ಮಾರ್ಗಸೂಚಿ ಪ್ರಕಟಗೊಂಡಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ.

ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗಿದೆ. ಗಣೇಶ ಚತುರ್ಥಿ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಪಿಒಪಿ ಮೂರ್ತಿಗಳನ್ನು ತಯಾರಿಸುವವರ ಹಾಗೂ ಮಾರಾಟ ಮಾಅಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ. ಈ ಮೂಲಕ ಪಿಒಪಿ ಮೂರ್ತಿಗಳನ್ನು ನಿಷೇಧಿಸಲಾಗಿದೆ.

ಬಿಬಿಎಂಪಿ ಉಪವಿಭಾಗಗಳ ನೋಡಲ್ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆ ಅಧಿಕಾರಿಗಳು ಗೌರಿ- ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ.
ಗಣೇಶಚತುರ್ಥಿ ಪರಿಸರಸ್ನೇಹಿ ಆಚರಣೆ ದೃಷ್ಟಿಯಿಂದ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ.

ಗಣೇಶ ಮೂರ್ತಿ ತಯಾರಿಕೆಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಇಂತಹ ವಸ್ತುಗಳನ್ನು ಬಳಸಿ ತಯಾರಿಸುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ.

ನೈಸರ್ಗಿಕವಾದ ಜೇಡಿಮಣ್ಣಿನಿಂದ ತಯಾರಿಸಿಸ್ದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ತಯಾರಿಸಬೇಕು
ಗಣೇಶಮೂರ್ತಿ ಪ್ರತಿಷ್ಠಾಪಿಸಲು ಅನುಮತಿಗಾಗಿ ಉಪವಿಭಾಗೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಳ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕು. ಅಧಿಕಾರಿಗಳು ಏಕಗವಾಕ್ಷಿ ವ್ಯವಸ್ಥೆ ಮೂಲಕ ತ್ವರಿತವಾಗಿ ಅನುಮತಿ ನೀಡಬೇಕು.

ಬಿಬಿಎಂಪಿ ಮಿತಿಯೊಳಗೆ ಉಪವಿಭಾಗೀಯ ಕಚೇರಿಗಳಲ್ಲಿ 75 ಏಕ ಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆಇನ್ನು ನಾಗರಿಕರು ಸಣ್ಣ ಪರಿಸರಸ್ನೇಹಿ ವಿಗ್ರಹಗಳನ್ನು ಮನೆಯಲ್ಲಿಯೇ ಬಕೆಟ್ ಗಳಲ್ಲಿ ಮುಳುಗಿಸಿ ನಂತರ ಜೇಡಿಮಣ್ಣನ್ನು ಗಾರ್ಡನಿಂಗ್ ಗಾಗಿ ಮರುಬಳಕೆಮಾಡಬಹುದು.

ಸಾರ್ವಜನಿಕ ಗಣೇಶಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲಿ ಸ್ಥಳಗಳನ್ನು ಗೊತ್ತುಪಡಿಸುತ್ತದೆ. ವಾರ್ಡ್ ಮಿತಿಯಲ್ಲಿ ಸಂಚಾರಿ ವಿಸರ್ಜನಾ ಘಟಕಗಳನ್ನು ಸಹ ನಿಯೋಜಿಸಲಾಗುವುದು.

ಗಣೇಶ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳನ್ನು ಬಳಸದೆ, ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಆಚರಿಸಲು ಖ್ಯಾತ ನಟರಾದ ನೆನಪಿರಲಿ ಪ್ರೇಮ್ ರವರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read