HomeKarnatakaಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಶೀಘ್ರ

ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಶೀಘ್ರ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಗೆ ಸರ್ಕಾರ ಮುಂದಾಗಿದ್ದು, ಮತ್ತೊಮ್ಮೆ ಎಲ್ಲಾ ಫಲಾನುಭವಿಗಳು ಅರ್ಜಿ ಸಲ್ಲಿಸಲು ಮಾರ್ಗಸೂಚಿ ಸಿದ್ದಪಡಿಸುತ್ತಿದೆ.

ಇನ್ನು ಎರಡರಿಂದ ಮೂರು ದಿನಗಳಲ್ಲಿ ಮಾರ್ಗಸೂಚಿಯ ಅಂತಿಮಗೊಳಿಸಲಾಗುವುದು. ಮೃತಪಟ್ಟವರು, ಐಟಿ/ಜಿಎಸ್‌ಟಿ ಪಾವತಿದಾರರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೀಘ್ರದಲ್ಲೇ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಂಡಿದೆ.

ಅನಕ್ಷರಸ್ಥರು ಸೇರಿದಂತೆ ಅರ್ಜಿ ಸಲ್ಲಿಸಲು ಬಾರದವರಿಗೆ ಸಹಾಯ ಮಾಡಲು ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಳ್ಳಲಾಗುವುದು. ಅಂಗನವಾಡಿ ಸಿಬ್ಬಂದಿಯ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಆ್ಯಪ್ ಇನ್ಸ್ಟಾಲ್ ಮಾಡಲಿದ್ದು, ಈ ಆ್ಯಪ್ ಮೂಲಕ ಅನಕ್ಷರಸ್ಥರು, ಬಡವರು ಅರ್ಜಿ ಸಲ್ಲಿಸಬಹುದು. ಅಲ್ಲದೇ, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಸೇವಾ ಕೇಂದ್ರಗಳಲ್ಲಿಯೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸ್ವೀಕರಿಸುವ ವೇಳೆ ಫೇಸ್ ರೆಕಗ್ನಿಶನ್, ಬಯೋಮೆಟ್ರಿಕ್ ಸಂಗ್ರಹಿಸಲಾಗುವುದು. ಅರ್ಜಿ ಸಲ್ಲಿಸುವ ಫಲಾನುಭವಿಗಳು ರಾಜ್ಯದಲ್ಲಿರುವ ಬ್ಯಾಂಕ್ ಖಾತೆ ನೀಡಬೇಕು. ಯೋಜನೆಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ದಾರರು ಅರ್ಹರಾಗಿದ್ದು, ಐಟಿ/ಜಿಎಸ್‌ಟಿ ಪಾವತಿದಾರರು ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular