HomeKarnatakaಶಾಲೆಗಳ ಸ್ವಚ್ಛತೆ ಬಗ್ಗೆ ಮಾರ್ಗಸೂಚಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಾಲೆಗಳ ಸ್ವಚ್ಛತೆ ಬಗ್ಗೆ ಮಾರ್ಗಸೂಚಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಶಾಲೆಗಳ ಸ್ವಚ್ಛತೆಯ ಜವಾಬ್ದಾರಿ ಕೇವಲ ಶಿಕ್ಷಕರದು ಮಾತ್ರವಲ್ಲ, ಎಸ್.ಡಿ.ಎಂ.ಸಿ. ಕೂಡ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಶೀಘ್ರದಲ್ಲಿಯೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳಲ್ಲಿ ಸ್ವಚ್ಛತೆ ಸಮಸ್ಯೆ ಎದುರಾಗಿದೆ. ಆದರೆ, ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವಂತಹ ಕೆಲಸ ಮಾಡಬಾರದು. ಇಂತಹ ಘಟನೆಗಳು ಇಲಾಖೆಗೆ, ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತವೆ. ಇಂತಹ ಘಟನೆಗಳು ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular