ಸೂರತ್: ಗುಜರಾತ್‌ನ ಸೂರತ್‌ನ ಜವಳಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ.
ಕಡೋದರದ ಜೋಲ್ವಾ ಪ್ರದೇಶದಲ್ಲಿರುವ ಸಂತೋಷ್ ಡೈಯಿಂಗ್ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಆಕಾಶದಲ್ಲಿ ಕಪ್ಪು ಹೊಗೆಯ ಬೃಹತ್ ಮೋಡ ಹರಡಿದ್ದು, ಎತ್ತರದ ಜ್ವಾಲೆಗಳು ಗಾಳಿಯಲ್ಲಿ ಏರುತ್ತಿರುವುದು ಕಂಡುಬಂದಿದೆ.
ಘಟನೆಯ ನಂತರ, ಸೂರತ್ ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯ ಪೊಲೀಸರ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಸುಮಾರು 10 ರಿಂದ 15 ಜನರು ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ, ಸಿಕ್ಕಿಬಿದ್ದ ಕಾರ್ಮಿಕರನ್ನು ಹೊರತೆಗೆಯಲು ಸಿಮೆಂಟ್ ಶೀಟ್ ಗಳನ್ನು ಒಡೆದಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.