HomeIndiaಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಕಾರ್ಮಿಕರು ಸಾವು

ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 7 ಕಾರ್ಮಿಕರು ಸಾವು

ಅಹಮದಾಬಾದ್: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯ ದೀಸಾದಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿ ಪ್ರಕರ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಾರ್ಖಾನೆಯಲ್ಲಿ ಸಿಲುಕಿದ್ದ ಐವರು ಕಾರ್ಮಿಕರನ್ನು ರಕ್ಷಿಸಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular