HomeIndiaSHOCKING: ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಸಾವು: ಕಳೆದ 45 ದಿನಗಳಲ್ಲಿ 8ನೇ ಘಟನೆ

SHOCKING: ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಸಾವು: ಕಳೆದ 45 ದಿನಗಳಲ್ಲಿ 8ನೇ ಘಟನೆ

ಗುಜರಾತ್‌ ನ ರಾಜ್‌ಕೋಟ್‌ ನಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಗುಜರಾತ್‌ನಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಡೆದ ಎಂಟನೇ ಘಟನೆ ಇದಾಗಿದೆ. ಮೃತರನ್ನು ಮಯೂರ್ ಎಂದು ಗುರುತಿಸಲಾಗಿದೆ. ಶಾಸ್ತ್ರಿ ಮೈದಾನದಲ್ಲಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮಯೂರ್ ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾನುವಾರ ಆಟವಾಡುತ್ತಿದ್ದಾಗ ಬಳಲಿದ ಅವರು ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಸ್ನೇಹಿತರು ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮಯೂರ್ ಅಕ್ಕಸಾಲಿಗರಾಗಿದ್ದು, ಕುಟುಂಬದ ಏಕೈಕ ಆಧಾರವಾಗಿದ್ದರು. ಮಯೂರ್ ಯಾವುದೇ ರೀತಿಯ ದುರಭ್ಯಾಸ ಇರಲಿಲ್ಲ. ಆರೋಗ್ಯವಾಗಿಯೇ ಇದ್ದರು. ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ಅವರ ಸಂಬಂಧಿಕರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular